ಸಾಂದರ್ಭಿಕ ಚಿತ್ರ 
ಜಿಲ್ಲೆ

ಮಾದಕವಸ್ತು ಮಾರಾಟ-ಸೇವನೆ ಆರೋಪ 6 ಮಂದಿಯ ಬಂಧನ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವು ಕಡೆ ಮಾದಕ ವಸ್ತು ಮಾರಾಟ ಮತ್ತು ಸೇವನೆ ಮಾಡಿದ ಆರೋಪದಲ್ಲಿ ಒಟ್ಟು 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಬಲ್ಲಾಳ್‌ಬಾಗ್ ಶ್ರೀದೇವಿ ಕಾಲೇಜು ರಸ್ತೆ ಬಳಿ ಮಾದಕ ವಸ್ತು ಸೇವನೆ ಆರೋಪದ ಮೇಲೆ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಎರ್ನಾಕುಳಂ ನಿವಾಸಿ ಅಮಲ್ ಥಾಮಸ್ (23), ಕಣ್ಣೂರು ಮುತಿಯಂಗ ನಿವಾಸಿ ಇಸ್ರತುಲ್ ಇಬಾದ್ (21), ಎರ್ನಾಕುಳಂ ಸಿರಿಯನ್ ಚರ್ಚ್ ರಸ್ತೆ ನಿವಾಸಿ ಮಾರ್ಟಿನ್ ಸ್ಟೀವಿನ್ ಪೈವಾ (20) ಪ್ರಕರಣದ ಆರೋಪಿಗಳು. ಆರೋಪಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ನಗರದ ಕೋರ್ಟ್‌ಗೆ ಹೋಗುವ ರಸ್ತೆ ಬದಿಯಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಎ್. ಸೈುಲ್ ರಾಝ್ (26) ಎಂಬಾತನನ್ನು ಬಂಧಿಸಲಾಗಿದೆ. ಜೂ.11ರಂದು ಮಧ್ಯಾಹ್ನ 1.30ರ ವೇಳೆಗೆ ಆರೋಪಿಗಳು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಗಿರಾಕಿಗಳನ್ನು ಕಾಯುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಬಂದರು ಪೊಲೀಸರು ದಾಳಿ ನಡೆಸಿ ಸುಮಾರು 13ಸಾವಿರ ರೂ. ಮೌಲ್ಯದ 1.30ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್, 1 ಅಟೋರಿಕ್ಷಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೂಡುಬಿದಿರೆ ಪುತ್ತಿಗೆ ಗ್ರಾಮದ ಮುಲ್ಕಿ ಕ್ರಾಸ್ ಬಳಿ ನಿರ್ಜನ ಪ್ರದೇಶದಲ್ಲಿ ಅಮಲು ಪದಾರ್ಥ ಸೇವನೆ ಆರೋಪದಲ್ಲಿ ಯುವಕನನ್ನು ಬಂಧಿಸಲಾಗಿದೆ. ಮೂಡುಬಿದಿರೆ ಮಾರೂರು ನಿವಾಸಿ ವಿಜಯ ಪೂಜಾರಿ (25) ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಆತನೂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಮೂಡುಬಿದಿರೆ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮೂಡುಬಿದಿರೆ ಕೋಟೆಬಾಗಿಲುವಿನ ನಿರ್ಜನ ಪ್ರದೇಶದಲ್ಲಿ ಅಮಲು ಪದಾರ್ಥ ಸೇವನೆ ಮಾಡಿದ ಆರೋಪದಲ್ಲಿ ಕರಿಂಜೆ ಕಲ್ಲಬೆಟ್ಟು ನಿವಾಸಿ ಆರ್ೀ(27) ಎಂಬಾತನನ್ನು ಬಂಧಿಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಮೂಡುಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.