ಜಿಲ್ಲೆ

ವಿಜಯಪುರದಲ್ಲಿ ತೆಪ್ಪ ಮುಗುಚಿ 6 ಜನ ನೀರು ಪಾಲು

Webdesk - Manjunatha B

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ (ಜುಲೈ 02) ಸಂಜೆ ನಡೆದಿದೆ.

ಜಿಲ್ಲೆಯ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದ್ದು, ನದಿಯ ನಡುಗಡ್ಡೆಗೆ ತೆರಳಿ ವಾಪಸ್ಸು ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ವಿಚಾರ ತಿಳಿದು ಸ್ಥಳಕ್ಕೆ ಭೇಟಿ ಕೊಲ್ಹಾರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್​.ಪಿ. ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.