ಮಂಡ್ಯ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಐದನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕದೊಂದಿಗೆ ಉತ್ತೀರ್ಣರಾಗಿರುವ ಹಾಗೂ ವಾರ್ಷಿಕ 2,50 ಲಕ್ಷ ರೂ ಆದಾಯದ ಮಿತಿಯೊಳಗಿರುವ ಅಭ್ಯರ್ಥಿಗಳು ಮೇ.3ರೊಳಗೆ ವೆಬ್‌ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಿ ಪ್ರತಿಯನ್ನು ಆಯಾ ತಾಲೂಕು ಸಹಾಯಕ ನಿರ್ದೇಶಕರ ಕಚೇರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.