ಜಿಲ್ಲೆ

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ 2025-26ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಮೀಸಲಾತಿ ಇರುತ್ತದೆ. ಅರ್ಜಿಯನ್ನು ವೆಬ್ ಸೈಟ್‌ನಲ್ಲಿ ಮಾರ್ಚ್ 10ರೊಳಗೆ ಸಲ್ಲಿಸಬೇಕು. ಪ್ರವೇಶ ಪರೀಕ್ಷೆಯು (ತಾತ್ಕಾಲಿಕ) ಏ.13ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮೊ.ಸಂ 9740052437 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.