ಚಾಮರಾಜನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವೆಬ್‌ಸೈಟ್ಮ ಲಕ ಮೇ 10 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆ ಮೊ.ಸಂ. 9632139767, ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.