ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ 1ರಿಂದ 12ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ, ಕಾಲೇಜು ವಿಶೇಷ ಅಗತ್ಯತೆಯುಳ್ಳ ವಿದ್ಯಾರ್ಥಿಗಳಿಗೆ ನ. 6ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಶಿಬಿರಕ್ಕೆ ಹಾಜರಾಗಬೇಕು. ಈಗಾಗಲೇ ಯಾವುದೇ ಇಲಾಖೆ ಅಥವಾ ಸಂಸ್ಥೆಯಿಂದ ಸಾಧನ ಸಲಕರಣೆ ಪಡೆದಿದ್ದು, ಅವು ಸುಸ್ಥಿತಿಯಲ್ಲಿದ್ದರೆ ಅಂಥವರು ಶಿಬಿರಕ್ಕೆ ಹಾಜರಾಗಬಾರದೆಂದು ಪ್ರಕಟಣೆ ಕೋರಿದೆ.