ಹುಬ್ಬಳ್ಳಿ : ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಸರ್ಕಾರ ತೀಮಾನ ತೆಗೆದುಕೊಂಡಿರುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ವಿದ್ಯುತ್ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಆರಂಭದಲ್ಲಿ ಮಳೆ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿತ್ತು. ಹೀಗಾಗಿ, ವಿದ್ಯುತ್ ಬೇಡಿಕೆ ಹೆಚ್ಚಿತ್ತು. ಉತ್ತರ ಪ್ರದೇಶ ಹಾಗೂ ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಖರೀದಿಸಿ, ಸಮಸ್ಯೆ ಪರಿಹಾರಿಸಲಾಗಿತ್ತು. ಇದೀಗ, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಎಂದರು.
ರಾಜ್ಯದಲ್ಲಿ 100 ಸಬ್ಸ್ಟೇಶನ್ಗಳನ್ನು ಮುಂದಿನ ಒಂದು ವರ್ಷದಲ್ಲಿ ನಿರ್ವಿುಸಲಾಗುವುದು. ಈಗಾಗಲೇ ಎರಡು ಸಬ್ಸ್ಟೇಶನ್ಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. 100 ಸಬ್ಸ್ಟೇಶನ್ಗಳು 2,500 ಮೆಗಾವ್ಯಾಟ್ ವಿದ್ಯುತ್ ಸಾಮರ್ಥ್ಯ ಒಳಗೊಂಡಿವೆ. ಈಗಾಗಲೇ ಸಚಿವ ಸಂಪುಟದಲ್ಲಿ ರ್ಚಚಿಸಿ, ಟೆಂಡರ್ ಸಹ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, 200 ಕ್ಕಿಂತ ಹೆಚ್ಚು ಯುನಿಟ್ ವಿದ್ಯುತ್ ಬಳಸುವವರಿಗೆ ಯೋಜನೆಯಿಂದ ಅನುಕೂಲವಾಗಲಿದೆ. ಕಡಿಮೆ ವಿದ್ಯುತ್ ಬಳಸುವರಿಗೆ ಸೌರ ವಿದ್ಯುತ್ ಯೋಜನೆ ಪ್ರಯೋಜನವಾಗಲ್ಲ. ಹೀಗಾಗಿ, ಕೇಂದ್ರ ಸರ್ಕಾರದ ಪ್ರಧಾನಿ ಮಂತ್ರಿ ಸೌರ ವಿದ್ಯುತ್ ಯೋಜನೆಗೆ ಜನರು ಆಸಕ್ತಿ ತೋರುತ್ತಿಲ್ಲ ಎಮದು ತಿಳಿಸಿದರು.
ಸ್ಮಾರ್ಟ್ ಮೀಟರ್ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಸರ್ಕಾರ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆ ಸ್ಥಗಿತವಾಗಿಲ್ಲ. ಗೃಹಲಕ್ಷೀ ಗೆ ಪ್ರತಿ ತಿಂಗಳು 9 00 ಕೋಟಿ ರೂ. ಖರ್ಚಾಗುತ್ತಿದೆ ಎಂದು ತಿಳಿಸಿದರು.
ಶಾಸಕ ಎನ್.ಎಚ್. ಕೋನರೆಡ್ಡಿ, ಮಾಜಿ ಸಂಸದ ಐ.ಜಿ. ಸನದಿ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪಿರ್ ಖಾದ್ರಿ, ಹುಡಾ ಅಧ್ಯಕ್ಷ ಶಾಕೀರ ಸನದಿ,ಅನಿಲಕುಮಾರ ಪಾಟೀಲ, ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ ಯಲಿಗಾರ, ಸದಾನಂದ ಡಂಗನವರ, ಸುವರ್ಣ ಕಲ್ಲಕುಂಟಲಾ ಹಾಗೂ ಇತರರು ಇದ್ದರು.