ಬೆಳಗಾವಿ: ಇಲ್ಲಿನ ಇಟಗಿ ಗ್ರಾಮದ ಬಳಿ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಬಿದ್ದು ಏಳು ಮಂದಿ ಮೃತಪಟ್ಟ ದುರ್ಘಟನೆ ನಡೆದಿದೆ.
ಖಾನಾಪುರ ತಾಲೂಕಿನ ಇಟಗಿ-ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಬೋಗೂರ ಗ್ರಾಮದವರಾಗಿದ್ದು ಇಟಗಿಗೆ ಕಬ್ಬು ಕಟಾವು ಮಾಡಲು ತೆರಳುತ್ತಿದ್ದರು.
ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೆ ಮೂರ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಹಲವರು ಗಾಯಗೊಂಡಿದ್ದಾರೆ. ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.