Golden Students Of Gulbarga University 
ಜಿಲ್ಲೆ

74 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ

ಬಾಬುರಾವ ಯಡ್ರಾಮಿ

ಕಲಬುರಗಿ : ಗುಲಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿವಿಧ ವಿಭಾಗದ ಹೆಚ್ಚಿನ ಅಂಕ ಗಳಿಸಿದ 74 ಅಭ್ಯರ್ಥಿಗಳಿಗೆ 168 ಚಿನ್ನದ ಪದಕ ಪ್ರದಾನ ಮಾಡಲಾಯಿತು. 9 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ಪರಿವರ್ತಿಸಿ 14 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕನ್ನಡ ಅಧ್ಯಯನ‌ ಸಂಸ್ಥೆಯ ವಿದ್ಯಾರ್ಥಿನಿ ಆನಂದಮ್ಮ ಅವರು 13 ಚಿನ್ನದ ಪದಕ ಪಡೆದು ಘಟಿಕೋತ್ಸವದಲ್ಲಿ ಹೆಚ್ಚಿನ ಪದಕ ಪಡೆದ ವಿದ್ಯಾರ್ಥಿಯಾಗಿ ಹೊರಹೊಮ್ಮಿದರು. ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಸಮ‌ ಕುಲಾಧಿಪತಿಗಳಾಗಿರುವ ಡಾ.ಎಂ.ಸಿ.ಸುಧಾಕರ್ ಅವರು ಪ್ರದಾನ ಮಾಡಿದರು.