ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
ಪಟ್ಟಣದ ಶಾರದಾನಗರದ ಮನೆಯೊಂದರಲ್ಲಿ ಭಾನುವಾರ ರಾತ್ರಿ 75 ಗ್ರಾಂ ಚಿನ್ನಾಭರಣ ಹಾಗೂ 70 ಸಾವಿರ ರೂ. ನಗದು ಕಳವಾಗಿದೆ. ರವಿ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಯನಿಮಿತ್ತ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ರವಿ, ಭಾನುವಾರ ರಾತ್ರಿ ಮನೆಯಲ್ಲಿ ಮಲಗಿರುವಂತೆ ಪರಿಚಿತರಿಗೆ ಹೇಳಿದ್ದರು. ರಾತ್ರಿ ಮಳೆಯಿದ್ದ ಕಾರಣ ಅವರು ಬರಲು ಸಾಧ್ಯವಾಗಿರಲಿಲ್ಲ. ಇದನ್ನು ಖಚಿತಪಡಿಸಿಕೊಂಡ ಕಳ್ಳರು ಬಲವಾದ ಆಯುಧದಿಂದ ಬಾಗಿಲ ಬೀಗ ಮುರಿದು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 70 ಸಾವಿರ ರೂ. ನಗದು ಹಾಗೂ 75 ಗ್ರಾಂ ಚಿನ್ನಾಭರಣ ಅಪಹರಿಸಿದ್ದಾರೆ. ಸೋಮವಾರ ಬೆಳಗ್ಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.