ಜಿಲ್ಲೆ

ಕಾಂಗ್ರೆಸ್‌ನಿಂದ ೭೭ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಆದರ್ಶ್. ಎಂ.ಕೆ.

ಮಡಿಕೇರಿ:ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಸೇವಾದಳ ತಂಡದಿಂದ ಗೌರವ ವಂದನೆ ಸ್ವೀಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪರವರು ಧ್ವಜಾರೋಹಣ ನೆರವೇರಿಸಿದರು. ನಂತರ ಕಛೇರಿಯಲ್ಲಿ ಸಭಾ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.


ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ಸ್ವಾತಂತ್ರ್ಯ ದಿನದ ಆಚರಣೆಯ ಜತೆಗೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಬದುಕುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅನುಸರಿಸಬೇಕು. ಪ್ರಸ್ತುತ ಮಣಿಪುರದಲ್ಲಿ ಒಬ್ಬ ಭಾರತೀಯ ಮತ್ತೋಬ್ಬ ಭಾರತೀಯನ ಮೇಲೆ ನಡೆಸುತ್ತಿರುವ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿದರು.


ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಾಜಿ ನಗರ ಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜುಲೇಕಾಬಿ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಹಿರಿಯ ಮುಖಂಡರಾದ ಟಿ.ಎಂ.ಅಯ್ಯಪ್ಪ, ಚಂದ್ರಶೇಖರ್ ಕಾರ್ಯಕ್ರಮ ಕುರಿತು ಮಾತನಾಡಿದರು.


ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚಂದ್ರಮೌಳಿ, ಟಿ.ಪಿ.ರಮೇಶ್, ಸುರಯ್ಯ ಅಬ್ರಾರ್, ರಾಜೇಶ್ ಯಲ್ಲಪ್ಪ, ಪ್ರಕಾಶ್ ಆಚಾರ್ಯ, ಮಂಡಿರ ಸದಾ ಮುದ್ದಪ್ಪ, ಜೆ.ಸಿ.ಜಗದೀಶ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.