ಜಿಲ್ಲೆ

77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆ

ಬೆಳಗಾವಿ: ಜಿಲ್ಲಾಡಳಿತ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಸ್ಟ್ 15ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶವನ್ನು ಜಿಲ್ಲೆಯ ಜನತೆಗೆ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆ ಸರ್ಕಾರ ಮುಖ್ಯ ಸಚೇತಕ ಅಶೋಕ ಮ. ಪಟ್ಟಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ, ಆರಕ್ಷಕ ಮಹಾನಿರೀಕ್ಷಕ ವಿಕಾಸಕುಮಾರ್, ಬೆಳಗಾವಿ ನಗರ ಪೋಲಿಸ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, ಪೊಲೀಸ ವರಿಷ್ಠಾಧಿಕಾರಿ ಸಂಜೀವ ಎಂ. ಪಾಟೀಲ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ.