ಜಿಲ್ಲೆ

ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ವಿದ್ಯಾಪೀಠ ಟ್ರಸ್ಟಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಪಂಕಜ ಕೆ.ಎಂ.

ಬೆಂಗಳೂರು:  ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ವಿದ್ಯಾಪೀಠ ಟ್ರಸ್ಟಿ ವತಿಯಿಂದ ನಗರದ ಚಂದ್ರಾಬಡಾವಣೆಯಲ್ಲಿನ ಶ್ರೀ ಸಿದ್ಧಗಂಗಾ ಪಬ್ಲಿಕ್ ಸ್ಕೂಲ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಶಿಸ್ತಿನ ಪಥ ಸಂಚಲನ ನಡೆಸಿದರು. ರಂಗಕರ್ಮಿ ಡಾ.ಬಿ. ವಿ. ರಾಜಾರಾಮ್, ವಿಜ್ಞಾನಿ ಕೃಷ್ಣಮೂರ್ತಿ ಮಂಜುನಾಥ ಅವರು ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಮಹತ್ವ ಹಾಗೂ ದೇಶದ ಪ್ರಗತಿಯಲ್ಲಿ ಯುವಕರ ಪಾತ್ರವನ್ನು ತಿಳಿಸಿಕೊಟ್ಟರು.

ಈ ವೇಳೆ ಎಸ್.ಎಸ್. ಕೆ. ವಿ. ಪಿ. ಟ್ರಸ್ಟ್ ನ ಜಂಟಿ ಕಾರ್ಯದರ್ಶಿ ಎಸ್. ಮೃತ್ಯುಂಜಯ, ನವಭಾರತದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸೋಣ ಮತ್ತು ಶ್ರಮಿಸೋಣ ಎಂದು ಮಕ್ಕಳಿಗೆ ಕರೆ ನೀಡಿದರು. ನಂತರ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ಪಠ್ಯ, ಪಠ್ಯೇತರ ಚಟುವಟಿಕೆಗಳು ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಟ್ರಸ್ಟ್‌ನ ಆಡಳಿತ ಮಂಡಳಿಯ ಸದಸ್ಯ ಟಿ. ಎಸ್ . ತುಳಸಿಕುಮಾರ್ ( ಗೌರವಾನ್ವಿತ ಶೈಕ್ಷಣಿಕ ಸಲಹೆಗಾರ), ಸಿದ್ಧಗಂಗಾ ಹೈಯರ್ ಪ್ರೈಮರಿ ಸ್ಕೂಲ್ ಪ್ರಾಂಶುಪಾಲೆ ಟಿ.ಎಂ. ಹಂಸ, ಟ್ರಸ್ಟ್‌ನ ಆಡಳಿತ ವ್ಯವಸ್ಥಾಪಕಿ ಎಂ. ಲಕ್ಷ್ಮಿ, ಗೌರ್ನಿಂಗ್ ಕೌನ್ಸಿಲ್ ಸದಸ್ಯರಾದ ಡಾ. ಶಂಕರಲಿಂಗಯ್ಯ, ಎಂ. ಮಾದಯ್ಯ ಹಾಗೂ ಟ್ರಸ್ಟ್ ನ ಅಡಿಯಲ್ಲಿನ ಎಲ್ಲಾ ಶಾಲಾ ಕಾಲೇಜುಗಳ ಪ್ರಾಂಶುಪಾಲರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.