ಜಿಲ್ಲೆ

ಮಹಮ್ಮದ್ ರಯ್ಯನ್ ಪ್ರಥಮ

ಸೌಮ್ಯ ಆರ್

ಬೆಳ್ತಂಗಡಿ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿ ಸಿವಿಸಿ ಹಾಲ್‌ನಲ್ಲಿ ನಡೆದ ರಾಷ್ಟ್ರಮಟ್ಟದ 7ನೇ ಓಪನ್ ಕರಾಟೆ ಚಾಂಪಿಯನ್‌ಷಿಪ್-2024 ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ಮಹಮ್ಮದ್ ರಯ್ಯನ್ ಕಟಾ ಹಾಗು ಫೈಟಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಗಳಿಸಿದ್ದಾರೆ. ಶಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಉಜಿರೆ ಗಾಂಧಿನಗರ ನಿವಾಸಿ ಬಿ.ಎಚ್. ಇಬ್ರಾಹಿಮ್ ಮತ್ತು ನೂರ್ ಜಹಾನ್ ದಂಪತಿ ಪುತ್ರ.