ಜಿಲ್ಲೆ

7ರಂದು ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆ

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಡಿ.7ರಂದು ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸುವರು. ಸಚಿವರಾದ ಕೆ. ವೆಂಕಟೇಶ್,ದಿನೇಶ್ ಗುಂಡೂರಾವ್, ಡಾ. ಎಚ್.ಸಿ ಮಹದೇವಪ್ಪ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ , ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಸಂಸದ ಸುನೀಲ್ ಬೋಸ್ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.