ಜಿಲ್ಲೆ

7ರಂದು ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಭೆ

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನ.7ರಂದು ಬೆಳಗ್ಗೆ 10.30ಕ್ಕೆ ಒನಕೆ ಓಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ ಏರ್ಪಡಿ ಸಲಾಗಿದೆ. ಡಿಸಿ ಜಿಆರ್‌ಜೆ ದಿವ್ಯಾಪ್ರಭು ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾಮಟ್ಟದ ಅಧಿಕಾರಿಗಳು,ಸಮಾಜದ ಮುಖಂಡರು ಸಭೆಗೆ ಆಗಮಿಸಿ ಸಲಹೆ, ಸೂಚನೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಕೋರಿದ್ದಾರೆ.