ಜಿಲ್ಲೆ

7ರಂದು ಪೂರ್ಣಕುಂಭದೊಂದಿಗೆ ಮೆರವಣಿಗೆ

ಸಿರಗುಪ್ಪ: ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.7ರಂದು ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಗೌಸಿಯಾ ಬೇಗಂ ಹೇಳಿದರು.

ಪಟ್ಟಣದ ಸಿಡಿಪಿಒ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಬುಧವಾರ ಮಾತನಾಡಿದರು. ತಾಲೂಕು ಮೈದಾನದಿಂದ ವೇದಿಕೆ ಸ್ಥಳದವರೆಗೆ ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಸಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.

ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸಮುದಾಯದ ಪ್ರಮುಖರು ತಹಸೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು. ಪಟ್ಟಣದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಹೊಸ ಭಾವಚಿತ್ರ ಅಳವಡಿಸಬೇಕು. ವೃತ್ತದಲ್ಲಿ ಕಸ ಹಾಕದಂತೆ ನಿಯಂತ್ರಿಸಬೇಕೆಂದು ಆಗ್ರಹಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಮಾ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಅಧ್ಯಕ್ಷ ಟಿ.ನರಸಿಂಹನಾಯಕ, ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ಸಣ್ಣ ವೆಂಕಟೇಶ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ತಾಪಂ ಸಹಾಯಕ ನಿರ್ದೇಶಕ ಬಸವರಾಜ, ಸಿಡಿಪಿಒ ಪ್ರದೀಪ್ ಕುಮಾರ್, ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್.ಬಿ.ವೆಂಕಟೇಶ, ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬಾಗೇವಾಡಿ ಮುದುಕಪ್ಪ, ಖಜಾಂಚಿ ಎಸ್.ನರೇಂದ್ರಸಿಂಹ, ನಿರ್ದೇಶಕರಾದ ಎಂ.ವೀರೇಶಪ್ಪ, ಬಸವರಾಜ, ವಿರೂಪಾಕ್ಷಪ್ಪ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕಮಹಾಸಭಾದ ಉಪಾಧ್ಯಕ್ಷ ಎಚ್.ಬಿ.ಈರಣ್ಣ, ಗೌರವ ಅಧ್ಯಕ್ಷ ಯಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಗಾದಿಲಿಂಗ ಇದ್ದರು.