ಗೋಣಿಕೊಪ್ಪಲು: ಚೆಕ್ಕೇರ ಒಕ್ಕ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೆಕ್ಕೇರ ಕ್ರಿಕೆಟ್ ನಮ್ಮೆಯಲ್ಲಿ ಸೋಮವಾರ 8 ತಂಡಗಳು ಮುನ್ನಡೆ ಪಡೆದುಕೊಂಡಿವೆ.
ಮೂಕೊಂಡ ಮತ್ತು ಕಾಯಪಂಡ ತಂಡಗಳ ನಡುವೆ ನಡೆದ ಪಂದಲ್ಲಿ ಮೊದಲು ಬ್ಯಾಟ್ ಆಯ್ದುಕೊಂಡ ಮೂಕೊಂಡ ಕಂಬೀರಂಡ ತಂಡ ನಿಗದಿತ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿತು. ಕಾಯಪಂಡ ತಂಡ 8 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತು.
ಅಡ್ಡೆಂಗಡ ಮತ್ತು ಹೊಟ್ಟೆಯಂಗಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೊಟ್ಟೆಂಗಡ ತಂಡ ನಿಗದಿತ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 55 ರನ್‌ಗಳಿಸಿತು. ಅಡ್ಡೆಂಗಡ ತಂಡ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.
ಕಟ್ಟೇರ ಮತ್ತು ಕಾಡ್ಯಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕಟ್ಟೇರ ತಂಡ ನಿಗದಿತ 6 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 41ರನ್ ಗಳಿಸಿತು. ಕಾಡ್ಯಮಾಟ ತಂಡ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.
ಬೊಪ್ಪಂಡ ಮತ್ತು ಮಾದೇಟಿರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಾದೇಟಿರ ತಂಡ ನಿಗದಿತ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 35ರನ್ ಗಳಿಸಿತು. ಬೊಪ್ಪಂಡ ತಂಡ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಕೋಣೇರಿರ ಮತ್ತು ನಾಟೋಳಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕೋಣೇರಿರ ತಂಡ ನಿಗದಿತ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟವಿಲ್ಲದೆ 92ರನ್ ಗಳಿಸಿತು. ನಾಟೋಳಂಡ ತಂಡ 4 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು.
ಪಾಸೂರ ಮತ್ತು ಬಲ್ಲಿಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಬಲ್ಲಿಮಾಡ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54ರನ್ ಗಳಿಸಿತು. ಪಾಸೂರ 4 ವಿಕೆಟ್ ಕಳೆದುಕೊಂಡು 49 ರನ್ ಗಳಿಸಿತು.
ಮೇರಿಯಂಡ ಮತ್ತು ಕುಂಡ್ಯೋಳಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕುಂಡ್ಯೋಳಂಡ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿತು. ಮೇರಿಯಂಡ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಕರ್ತಚಿರ ಮತ್ತು ತಾಚಮಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕರ್ತಚಿರ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿತು. ತಾಚಮಂಡ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.