ಹುಬ್ಬಳ್ಳಿ: ಇಲ್ಲಿಯ ಗೋಕುಲ ಗ್ರಾಮ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ 1_,89,500 ರೂ. ನಗದು ಚುನಾವಣಾಧಿಕಾರಿಗಳು ಗುರುವಾರ ವಶ ಪಡಿಸಿಕೊಂಡಿದ್ದಾರೆ.
ಬೆಳಗಾವಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇನ್ನೊವಾ ಕಾರ್ ಪರಿಶೀಲಿಸಿದಾಗ ದಾಖಲೆ ಇಲ್ಲದ ಹಣ ಪತ್ತೆ ಆಗಿದ್ದು, ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.