ಜಿಲ್ಲೆ

8ರಂದು ನಂಜೇದೇವನಪುರ ಡೇರಿಗೆ ಚುನಾವಣೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ತಾಲೂಕಿನ ನಂಜೇದೇವನಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರ ಚುನಾವಣೆ ಜ. 8ಕ್ಕೆ ನಡೆಯಲಿದೆ.

ಸಂಘದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಗೆಯವರೆಗೆ ಮತದಾನ ನಡೆಯಲಿದೆ. ಈ ಸಂಬಂಧ ಡಿ. 30ರಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದ್ದು, ಡಿ. 31 ರಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು.

ಜ.1 ರಂದು ನಾಮಪತ್ರಗಳ ಪರಿಶೀಲನೆ, 2ರಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದ್ದು, ಇದೇ ದಿನ ಅಂತಿಮ ಕಣದಲ್ಲಿರುವ ಪಟ್ಟಿ ಪ್ರಕಟವಾಗಲಿದೆ. ಜ.8 ರಂದು ಮತದಾನ ನಡೆಯಲಿದ್ದು, ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸಂಘದ ರಿಟರ್ನಿಂಗ್ ಅಫೀಸರ್ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್. ಸುಭಾಷಿಣಿ ಪ್ರಕಟಣೆೆಯಲ್ಲಿ ತಿಳಿಸಿದ್ದಾರೆ.