ಚಿಂತಾಮಣಿ: ನಗರದ ಆಶ್ರಯ ಬಡಾವಣೆಯ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಮದ್ಯ ಹಾಗೂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಡಾವಣೆಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದಾರೆ ಎಂದು ನಿವಾಸಿಗಳು ನೀಡಿದ ದೂರಿನ ಆಧಾರದಲ್ಲಿ ಅಬಕಾರಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದರು. 9 ಬಾಟಲಿ ವಿಸ್ಕಿ, ಮದ್ಯದ ಟೆಟ್ರಾ ಪ್ಯಾಕೆಟ್‌ಗಳು ಹಾಗೂ 38 ಗ್ರಾಪಂ ಒಣ ಗಾಂಜಾವನ್ನು ಅಬಕಾರಿ ಅಧಿಕಾರಿಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ದಾಳಿಯಲ್ಲಿ ಡಿವೈಎಸ್‌ಪಿ ಜಿ.ಎಸ್. ಪಾಟೀಲ್, ಇನ್‌ಸ್ಪೆಕ್ಟರ್ ಮಂಜುಳಾ, ಎಸ್‌ಐ ದೇವರಾಜ್ ಮತ್ತಿತರರು ಇದ್ದರು.