ಇಲ್ಲಿನ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ನವರಾತ್ರಿ ಪ್ರಯುಕ್ತ ಆಯೋಜಿಸಿರುವ 98ನೇ ನಾಡಹಬ್ಬ ಉತ್ಸವವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ.ಎಂ. ತ್ಯಾಗರಾಜ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸದ ಸಂಸದ ಜಗದೀಶ ಶೆಟ್ಟರ ಮಾತನಾಡಿ, ಸೂಕ್ಷ್ಮ ಗಡಿ ಪ್ರದೇಶವಾಗಿರುವ ಬೆಳಗಾವಿಯಲ್ಲಿ ಕನ್ನಡ ಉಳಿಸಲು ಅನೇಕ ಹೋರಾಟವಾಗಿದೆ. ಇದರ ಹಿನ್ನೆಲೆಯಲ್ಲಿ ಕನ್ನಡ ಮಹತ್ವ ಹೆಚ್ಚಿಸುವ ಕಾರ್ಯಕ್ರಮಗಳು ಹೆಚ್ಚೆಚ್ಚು ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿದ್ಯಾ ರೆಡ್ಡಿ ಉಪನ್ಯಾಸ ನೀಡಿದರು. ರಾಜಪ್ಪ ದಳವಾಯಿ, ಆರ್.ಪಿ. ಪಾಟೀಲ, ಸುಜಾತಾ ಉಳ್ಳಾಲ, ವಿಜಯಾ ಹಿರೇಮಠ, ಇತರರಿದ್ದರು.
ನಾಡಹಬ್ಬ ಸಮಿತಿ ಅಧ್ಯಕ್ಷ ಡಾ.ಎಚ್.ಬಿ.ರಾಜಶೇಖರ ಸ್ವಾಗತಿಸಿದರು. ಸಿ.ಕೆ.ಜೋರಾಪುರ ವರದಿ ಓದಿದರು. ಪ್ರೊ.ಬಸವರಾಜ ಕುಪ್ಪಸಗೌಡರ ನಿರೂಪಿಸಿದರು. ಸೋಮಲಿಂಗ ಮಾವಿನಕಟ್ಟಿ ವಂದಿಸಿದರು.
ಇಂದು ಉಪನ್ಯಾಸ
ನಾಡಹಬ್ಬದಲ್ಲಿ ಮಂಗಳವಾರ ಸಂಜೆ 6ಕ್ಕೆ ಜಾನಪದ ಕಲಾವಿದರ ಹಾಡು ಪಾಡು ಕುರಿತು ಡಾ.ಸಿ.ಕೆ.ನಾವಲಗಿ ಉಪನ್ಯಾಸ ನೀಡುವರು. ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ, ಡಾ.ಬಸವರಾಜ ಜಗಜಂಪಿ ಅಧ್ಯಕ್ಷತೆ ವಹಿಸುವರು. ಬೆಳ್ಳಿಚುಕ್ಕಿ ಅಕಾಡೆಮಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.