ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನ.9ರಂದು ಬೆಳಗ್ಗೆ 10 ಗಂಟೆಗೆ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ‌್ಯಕ್ರಮ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್‌ವಾಸುದೇವ ಉದ್ಘಾಟಿಸುವರು. ಪ್ರಾಚಾರ್ಯ ಡಾ.ಎಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್, ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ. ಅನಿಲ್ ಕುಮಾರ್, ಕಾರ‌್ಯದರ್ಶಿ ಆರ್. ಗಂಗಾಧರ್, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಆರ್. ವೆಂಕಟೇಶ್ ಭಾಗವಹಿಸುವರು. ಪ್ರಧಾನ ಕಾನೂನು ಅಭಿರಕ್ಷಕ ಎಸ್. ವಿಜಯಕುಮಾರ್ ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದೆ.