ಜಿಲ್ಲೆ

33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ರೈತಶಕ್ತಿ ಯೋಜನೆ ಘೋಷಣೆ

ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. 'ರೈತಶಕ್ತಿ' ಎಂಬ ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.

  • 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ
  • ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ
  • ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ
  • ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ಉತ್ತ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ
  • ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ
  • ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ