ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿಯಲ್ಲಿ ಹೊರಗೆ ಮತ್ತು ಒಳಗೆ ಎರಡೂ ಕಡೆ ಸೋಮವಾರ ಪ್ರತಿಭಟನೆ ನಡೆದಿದ್ದು, ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ರಾಯಚೂರಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನಿಸಿದ್ದನ್ನ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಒಳಗೆ ಅಂಬೇಡ್ಕರ್ ಸಂಘಟನೆ ಪ್ರತಿಭಟನೆ ಪ್ರತಿಭಟನೆ ನಡೆಸುತ್ತಿದ್ದರೆ, ಅತ್ತ ಪರೀಕ್ಷೆಯ ಫಲಿತಾಂಶ ಪ್ರಕಟಿಸಿಲ್ಲ ಎಂದು ವಿಶ್ವವಿದ್ಯಾಲಯದ ಹೊರಗೆ ಎಬಿವಿಪಿ ನೇತೃತ್ವದಲ್ಲಿ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟ ಪತ್ರಿಭಟನೆ ನಡೆಸುತ್ತಿತ್ತು.
ಈ ವೇಳೆ ವಿವಿಯ ಗೇಟ್ ಹಾಕಿ ಒಳಗೆ ಪ್ರವೇಶಿಸದಂತೆ ಎಬಿವಿಪಿ ಸಂಘಟನೆಯನ್ನ ಪೊಲೀಸರು ತಡೆದರು. ಒಳ ನುಗ್ಗಲು ಯತ್ನಿಸಿದಾಗ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿ ಗುಂಪು ಚದುರಿಸಿದ್ದಾರೆ. 25ರಿಂದ 30 ವಿದ್ಯಾರ್ಥಿಗಳಿಗೆ ಲಾಠಿ ಏಟು ಬಿದ್ದಿದ್ದು, ಓರ್ವ ವಿದ್ಯಾರ್ಥಿನಿಯ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ.