ಜಿಲ್ಲೆ

ಪೊಲೀಸ್​ ಠಾಣೆ ಮೆಟ್ಟಿಲೇರಿದ ನಟಿ ರಮ್ಯಾ! ಆರೋಪಿ ಬಂಧನಕ್ಕೆ ಪಟ್ಟು

arunakunigal

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅವರು ಖುದ್ದು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.

ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿಯ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಗುರುವಾರ ನಟಿ ರಮ್ಯಾ ದೂರು ದಾಖಲಿಸಿದ್ದಾರೆ. ದೂರು ಕೊಡುವ ಮುನ್ನ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರ ಚರ್ಚಿಸಿದ ರಮ್ಯಾ, ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ.

'Charlie 777 ಕನ್ನಡ ಚಲನಚಿತ್ರವನ್ನು ನೋಡಿ. ಈ ಸಿನಿಮಾ ಚೆನ್ನಾಗಿದೆ' ಎಂದು ಜೂ.6ರಂದು ನಟಿ ರಮ್ಯಾ ಅವರು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಜೂ.8ರಂದು preetam.prince.k ಎಂಬ ಹೆಸರಿನ ಇನ್​ಸ್ಟಾಗ್ರಾಂ ಖಾತೆದಾರ ನಟಿ ರಮ್ಯಾ ಬಗ್ಗೆ ಅಶ್ಲೀಲವಾಗಿ ನಿಂದಿಸಿದ ಕಮೆಂಟ್​ ಅನ್ನು ಟ್ಯಾಗ್ ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆ ಮೆಟ್ಟಿಲೇರಿದ ರಮ್ಯಾ, ಆರೋಪಿಯನ್ನ ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್​ಐಆರ್​ ದಾಖಲಾಗಿದ್ದು, ಸೆಂಟ್ರಲ್ ವಿಭಾಗದ ಸೈಬರ್ ಕ್ರೈಂ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.