ಜಿಲ್ಲೆ

ಕರೊನಾ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ಬೆಂಕಿ, ಇಬ್ಬರ ಸ್ಥಿತಿ ಚಿಂತಾಜನಕ

arunakunigal

ನೆಲಮಂಗಲ: ಕರೊನಾ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತುಮಕೂರು-ನೆಲಮಂಗಲ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.

ನೆಲಮಂಗಲ ತಾಲೂಕು ಎಡೆಹಳ್ಳಿ ಬಳಿ ಅಪರಿಚಿತ ವಾಹನ ಆಂಬುಲೆನ್ಸ್​ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಆಂಬುಲೆನ್ಸ್ ಹೊತ್ತಿ ಉರಿದಿದೆ. ಅಪರಿಚಿತ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ‌ ಸಿಬ್ಬಂದಿ ಬೆಂಕಿ ನಂದಿಸಿದರು. ತುಮಕೂರಿನ‌ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನತ್ತ ಕೋವಿಡ್​ ಸೋಂಕಿತನನ್ನು ಆಂಬುಲೆನ್ಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.