ಜಿಲ್ಲೆ

ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಬಿದ್ದ ಲೈಟಿಂಗ್ ಟ್ರಸ್! ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಬೆಳಗಾವಿ: ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಚೂನಮ್ಮ ದೇವಿ ಜಾತ್ರೆ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದೆ.

ಗುರುವಾರ ರಾತ್ರಿ ವೇದಿಕೆ ಕಾರ್ಯಕ್ರಮ ನಡೆಯುವಾಗಲೇ ಸೌಂಡ್ ಸಿಸ್ಟಮ್ ಮತ್ತು ಹೈಮಾಸ್ಕ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಬಿದ್ದಿದ್ದು, ಅದೃಷ್ಟವಶಾತ್​ ಪ್ರಾಣಹಾನಿ ಸಂಭವಿಸಿಲ್ಲ. ವೇದಿಕೆಯ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವರು ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ.

ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವಘಡದ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.