ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಏರ್ಪಡಿಸಿದ್ದ ಕಾಯಕ ಶರಣರ ಜಯಂತಿಯನ್ನು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಉದ್ಘಾಟಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಆರ್.ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಾಹಿತಿ ವೀರಹನುಮಾನ, ಮುಖಂಡರಾದ ರಾಮಣ್ಣ, ಬಿ.ಎಚ್.ಗುಂಡಳ್ಳಿ, ಭೀಮರಾಜ, ಎಸ್.ರಾಜು ಇದ್ದರು. 
ಜಿಲ್ಲೆ

ಮಕ್ಕಳಲ್ಲಿ ನೈತಿಕ ವೌಲ್ಯ ಬೆಳೆಸಿದಾಗ ಉತ್ತಮ ಸಮಾಜ

ರಾಯಚೂರು: ಮಕ್ಕಳಲ್ಲಿ ಮಾನವೀಯ ವೌಲ್ಯ ಮತ್ತು ನೈತಿಕ ವೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ವೌಲ್ಯಗಳನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ತಿಳಿಸಿದರು.
ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಏರ್ಪಡಿಸಿದ್ದ ಕಾಯಕ ಶರಣರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳಲ್ಲಿ ಸಂಸ್ಕೃತಿ, ಕಲೆ, ಸಾಹಿತ್ಯದ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಮಾನವೀಯ ವೌಲ್ಯಗಳ ಬಗ್ಗೆ ತಿಳಿಸಿಕೊಡುವ ಕೆಲಸವಾಗಬೇಕು. ಈ ಹಿಂದೆ ಶರಣರು ವೌಲ್ಯಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು, ಶರಣರ ಬದುಕು ಹಾಗೂ ಸಿದ್ಧಾಂತಗಳನ್ನು ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಆರ್.ಶಿವಕುಮಾರ ಮಾತನಾಡಿ, 12ನೇ ಶತಮಾನದಲ್ಲಿ ವಚನಕಾರರು, ಶರಣರು ಸಮಾಜದಲ್ಲಿನ ಜಾತಿ, ಲಿಂಗ ಬೇಧಗಳನ್ನು ಕಳಚಿ ಮಾನವೀಯ ವೌಲ್ಯಗಳ ಮೂಲಕ ಸಮ ಸಮಾಜ ಕಟ್ಟಲು ಹೊಸ ಕ್ರಾಂತಿಯನ್ನು ಮಾಡಿದ್ದರು. ಸಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ನಿವೃತ್ತ ಶಿಕ್ಷಕ ರಾಮಸ್ವಾಮಿ ನುಲಿ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಶರಣ ಸಂಸ್ಕೃತಿಯ ಪರಿಕಲ್ಪನೆಯ ಪರಿಚಯ ಇಲ್ಲದಂತಾಗಿದೆ. ಮಕ್ಕಳಲ್ಲಿ ಸಾಹಿತ್ಯ, ಶರಣ ಪರಿಕಲ್ಪನೆಯನ್ನು ಬೆಳೆಸಲು ಶ್ರಮಿಸುವುದರ ಜತೆಗೆ ಇಂತಹ ಕಾರ್ಯಕ್ರಮಗಳನ್ನು ಒಂದು ದಿನಕ್ಕೆ ಸಿಮೀತಗೊಳಿಸಬಾರದು ಎಂದು ಹೇಳಿದರು.
ಇದಕ್ಕೂ ಮುಂಚೆ ಅಂಬೇಡ್ಕರ್ ವೃತ್ತದಿಂದ ರಂಗಮಂದಿರದವರೆಗೆ ಕಾಯಕ ಶರಣರ ಭಾವಚಿತ್ರ ಮೆರವಣಿಗೆಗೆ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಾಹಿತಿ ವೀರಹನುಮಾನ, ವಿವಿಧ ಸಮಾಜದ ಮುಖಂಡರಾದ ರಾಮಣ್ಣ, ಬಿ.ಎಚ್.ಗುಂಡಳ್ಳಿ, ಭೀಮರಾಜ, ಎಸ್.ರಾಜು ಉಪಸ್ಥಿತರಿದ್ದರು.