ಜಿಲ್ಲೆ

ಹಿಂದುಳಿದ ವರ್ಗಗಳ ಮೀಸಲಿಗೆ ಕಾಂಗ್ರೆಸ್​ನಿಂದಲೇ ಕಂಟಕ: ಸಿದ್ದರಾಮಯ್ಯಗೆ ಸಿ.ಟಿ.ರವಿ ತಿರುಗೇಟು

arunakunigal

ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಿಗೆ ಕಾಂಗ್ರೆಸ್​ನಿಂದಲೇ ಕಂಟಕ ಎದುರಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ರಾಜ್ಯ ಸರ್ಕಾರದ ನಡೆಯಿಂದ ಹಿಂದುಳಿದ ವರ್ಗಗಳಿಗೆ ಮೀಸಲು ತಪ್ಪುತ್ತಿದೆ ಎಂಬ ಸಿದ್ದರಾಮಯ್ಯ ಆರೋಪ ಶುದ್ಧ ಸುಳ್ಳು. ಸುಪ್ರೀಂ ಕೋರ್ಟ್​ಗೆ ರಾಜ್ಯ ಸರ್ಕಾರ‌ ಹೋಗಿಲ್ಲ. ಮಹಾರಾಷ್ಟ್ರ ಪ್ರಕರಣದಲ್ಲಿ ಹೊರ ಬಿದ್ದ ತೀರ್ಪು ಇಡೀ ದೇಶದ ಪರಿಣಾಮ ಬೀರಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲು ಕುರಿತು ನಿಖರ ಅಂಕಿಅಂಶಗಳನ್ನು ಮಹಾರಾಷ್ಟ್ರ ಸರ್ಕಾರ ಮಂಡಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಮರ್ಥಿಸಿಕೊಂಡಿದ್ದರೆ ಈ ಪರಿಸ್ಥಿತಿ ಉದ್ಭವವಾಗುತ್ತಿದ್ದಿಲ್ಲ. ಮಹಾರಾಷ್ಟ್ರದಲ್ಲಿ ಇರುವುದು ಕಾಂಗ್ರೆಸ್ ಪಾಲುದಾರಿಕೆಯ ಸರ್ಕಾರ. ಹಿಂದುಳಿದ ವರ್ಗಗಳ ಮೀಸಲು ದುಸ್ಥಿತಿಗೆ ಕಾಂಗ್ರೆಸ್ ಕಾರಣವೆಂದು ಕಿಡಿಕಾರಿದರು.