ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್‌ನಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಿಲ್ಲ ಎಂದು ಜೆಡಿಎಸ್ ರಾಜ್ಯ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಟೀಕಿಸಿದರು.
ಬಜೆಟ್‌ನಲ್ಲಿ ಬಂಡವಾಳ ವೆಚ್ಚವನ್ನು 55,374 ಕೋಟಿ ರೂ.ಗೆ ಸೀಮಿತಗೊಳಿಸಲಾಗಿದೆ. ಸಾಲವೂ ಏರಿಕೆ ಆಗಿದೆ. ಐದು ಗ್ಯಾರಂಟಿಗಳಿಗಾಗಿ 58 ಸಾವಿರ ಕೋಟಿ ರೂ. ತೆಗೆದಿಡಬೇಕಾದ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಹಣ ಸಾಲುತ್ತಿಲ್ಲ. ಜತೆಗೆ ಒಟ್ಟು 90 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇವುಗಳಿಂದಾಗಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.