ಜಿಲ್ಲೆ

ಕಾರು-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

arunakunigal

ಹುಬ್ಬಳ್ಳಿ: ತಾರಿಹಾಳ ಬಳಿ ಭಾನುವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ದುರಮತ ಅಂತ್ಯ ಕಂಡಿದ್ದಾರೆ.

ಆನಂದ್(47) ಮತ್ತು ಪೃಥ್ವಿರಾಜ್ ತೇಲಿ(16) ಮೃತ ದುರ್ದೈವಿಗಳು. ಮಲ್ಲಿಕಾರ್ಜುನ ತೇಲಿ, ಕಬ್ಬೂರ್ ಆದಿತ್ಯ ಮತ್ತು ಸುಭಾಷ್ ಮಿಶ್ರಕೋಟಿ ಎಂಬುವರು ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭದಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳು ಮತ್ತು ಗಾಯಾಲುಗಳನ್ನು ಕಾರಿನಿಂದ ಹೊರ ತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಟ್ಟರು. ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.