ಜಿಲ್ಲೆ

ಪೊಲೀಸರ ಮೇಲೆ ಹಲ್ಲೆಗೆ ಯತ್ನ ಕೈ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಹಾವೇರಿ: ಪ್ರತಿಭಟನೆಗೆ ಅನುಮತಿ ಪಡೆಯದೇ ಅಕ್ರಮ ಕೂಟ ಕಟ್ಟಿಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಬೆಂಕಿ ಹಚ್ಚಿದ ಟಯರ್ ಉರುಳಿಸಿದ್ದು, ಅವಾಚ್ಯವಾಗಿ ನಿಂದಿಸಿ ಹಲ್ಲೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡೆತಡೆ ಮಾಡಿದ ಕೈ ಕಾರ್ಯಕರ್ತರ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಸೋಮವಾರ ನಗರದ ಸಿದ್ದಪ್ಪ ಹೊಸಮನಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಕೈ, ಕೈ ಮಿಲಾಯಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೀಗ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಸಿಪಿಸಿ ಎಸ್. ಬಸವರಾಜ ಅವರು, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಆನಂದ ನಿಂಗಪ್ಪ ಕಾಗದ, ರಾಜು ಶಿವಪುತ್ರಪ್ಪ ಶಿವಣ್ಣನವರ, ಬಸಲಿಂಗಯ್ಯ ಕುಮಾರಸ್ವಾಮಿ ಲಕ್ಷೆ್ಮೕಶ್ವರಮಠ, ಬಸವರಾಜ ಬಳ್ಳಾರಿ ಹಾಗೂ ಇನ್ನು ಹಲವರ ವಿರುದ್ಧ ದೂರು ದಾಖಲಿಸಿದ್ದಾರೆ.