ಮಡಿಕೇರಿ: ಚೇರಂಬಾಣೆಯ ಬೇಂಗ್ ನಾಡ್ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಒತ್ತೋರ್ಮೆ ಕೂಟ ಸಂಭ್ರಮದಿಂದ ನಡೆಯಿತು.
ಸಮಾಜದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೇಂಗ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಕೊಡವ ಸಂಸ್ಕೃತಿ, ಹಬ್ಬಗಳು, ಆಚಾರ ವಿಚಾರ, ಪರಂಪರೆ, ಪದ್ಧತಿಯ ಉಳಿವಿಗೆ ಕೈಜೋಡಿಸುವಂತೆ ಕರೆ ನೀಡಿದರು.
ಬೆಂಗಳೂರು ಬೇಂಗ್ ನಾಡ್ ಕೊಡವ ಒಕ್ಕೂಟದ ಅಧ್ಯಕ್ಷ ಕೇಕಡ ರವಿ ದೇವಯ್ಯ ಅವರು ಮಾತನಾಡಿದರು. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯ ನಿರ್ದೇಶಕ ನಾಪಂಡ ಗಣೇಶ್ ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ವಿವಿಧ ಆಟೋಟ ಸ್ಪರ್ಧೆಗಳು ಗಮನ ಸೆಳೆದವು.
ಸಮಾಜದ ಕಾರ್ಯದರ್ಶಿ ಕೇಕಡ ರೋಮಿ ಮೊಣ್ಣಪ್ಪ, ಜಂಟಿ ಕಾರ್ಯದರ್ಶಿ ಬಡ್ಡಿರ ನಳಿನಿ ಪೂವಯ್ಯ, ಪಟ್ಟಮಾಡ ಕುಟುಂಬದ ಹಿರಿಯರಾದ ಸೀತಮ್ಮ ಗಣಪತಿ, ಪ್ರಮುಖರಾದ ಪಟ್ಟಮಾಡ ವರುಣಿಕ ಪೊನ್ನಮ್ಮ, ತೇಲಪಂಡ ಲಕ್ಷ್ಮಿ ಪೆಮ್ಮಯ್ಯ ಉಪಸ್ಥಿತರಿದ್ದರು.