ಜಿಲ್ಲೆ

ಸಿದ್ಧಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ವೈದ್ಯಕೀಯ ಆಯೋಗವು 'ಸಿದ್ಧಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ'ಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ. ಮೊದಲ ಬ್ಯಾಚ್​​ನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿ ಸಿದ್ಧಗಂಗಾ ಮಠದ ಆಡಳಿತ ಮಂಡಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಪತ್ರ ಬರೆದಿದೆ.