ಚಿಕ್ಕಮಗಳೂರು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಡಿಸಿಸಿ ಬ್ಯಾಂಕ್ 2022-23ನೇ ಸಾಲಿನ ಸರ್ವ ಸದಸ್ಯರ ಸಭೆಯನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಉದ್ಘಾಟಿಸಿದರು. ಕೆ.ಆರ್.ಆನಂದಪ್ಪ, ಎಚ್.ಬಿ.ಶಿವಣ್ಣ, ಎಸ್.ಬಿ.ರಾಮಪ್ಪ ಇದ್ದರು. 
ಜಿಲ್ಲೆ

ಕಾರ್ಪೊರೇಟ್ ಬ್ಯಾಂಕ್‌ಗಳಿಗೆ ಸವಾಲು

ಚಿಕ್ಕಮಗಳೂರು: ಡಿಸಿಸಿ ಬ್ಯಾಂಕ್ ಡಿಜಿಟಲ್ ವ್ಯವಹಾರದಲ್ಲಿ ತೊಡಗಿಸಿಕೊಂಡು ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜತೆಗೆ ಎಟಿಎಂ, ಮೊಬೈಲ್ ಬ್ಯಾಂಕಿಂಗ್‌ನಂತಹ ನೂತನ ತಂತ್ರಾಂಶಗಳ ಸೇವೆಯನ್ನು ಗ್ರಾಹಕರಿಗೆ ಒದಗಿಸುವ ಮೂಲಕ ಕಾರ್ಪೊರೇಟ್ ಬ್ಯಾಂಕ್‌ಗಳಿಗೆ ಸವಾಲೊಡ್ಡಿ ಮುನ್ನಡೆಯುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಹೇಳಿದರು.
ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಡಿಸಿಸಿ ಬ್ಯಾಂಕ್ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದಲೇ ಮೈಕ್ರೋ ಎಟಿಎಂ ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಎಲ್ಲ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಒದಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ಟಿ.ಎಲ್.ರಮೇಶ್, ನಿರ್ದೇಶಕರಾದ ಕೆ.ಆರ್.ಆನಂದಪ್ಪ, ಎಚ್.ಬಿ.ಶಿವಣ್ಣ, ಎಸ್.ಬಿ.ರಾಮಪ್ಪ, ಡಿ.ಸಿ.ಶಂಕರಪ್ಪ, ಸಂದೀಪ್ ಕುಮಾರ್, ಎಂ.ಪರಮೇಶ್ವರಪ್ಪ, ಗಿರೀಶ್‌ಚೌಹಾಣ್ ಉಪಸ್ಥಿತರಿದ್ದರು.