ಜಿಲ್ಲೆ

ಹಿಜಾಬ್ ಕುರಿತು ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡ್ಬೇಡಿ: ಸಚಿವರಿಗೆ ಸಿಎಂ ತಾಕೀತು

ಬೆಂಗಳೂರು: ಹಿಜಾಬ್ ಪ್ರಕರಣದ ಬಗ್ಗೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವಿಷಯವಾಗಿ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡದಂತೆ ಸಚಿವ ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನೆಗಳ ಮಾಹಿತಿ ನೀಡಿದರು. ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ, ಮಂಡ್ಯ ಜಿಲ್ಲೆ ಸೇರಿದಂತೆ ಕೆಲವು ಕಡೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಅಗತ್ಯ ಕ್ರಮವಹಿಸಿದ್ದು, ಪರಿಸ್ಥಿತಿ ಕೈಮೀರದಂತೆ ನೋಡಿಕೊಂಡಿದ್ದಾರೆ ಎಂದು ವಿವರಿಸಿದರು.

ನಂತರ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಪ್ರಕರಣ ಕೋರ್ಟ್ ನಲ್ಲಿರುವ ಕಾರಣ ಯಾರೂ ಈ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.