ಜಿಲ್ಲೆ

ಸರ್ಕಾರವನ್ನು ಹಣಿಯಲು ಕಾಂಗ್ರೆಸ್​ ಸಜ್ಜು: ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿಯಲ್ಲಿ ಹೊರಟ ಕಾಂಗ್ರೆಸ್ ನಾಯಕರು

arunakunigal

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸರ್ಕಾರವನ್ನು ಹಣಿಯಲು ಸಿದ್ಧವಾಗಿರುವ ಪ್ರತಿಪಕ್ಷ ಕಾಂಗ್ರೆಸ್​, ಎತ್ತಿನಗಾಡಿಯಲ್ಲಿ ಮೆರವಣಿಗೆ ಹೊರಟು ಆರಂಭದಲ್ಲೇ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ.

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಶಾಸಕರೊಂದಿಗೆ ತಮ್ಮ ಮನೆಗಳಿಂದ ಎತ್ತಿನ ಗಾಡಿಯಲ್ಲಿ ವಿಧಾನಸೌಧತ್ತ ಹೊರಟರು. ಬೆಲೆ ಏರಿಕೆಯಿಂದ ಭವಿಷ್ಯದಲ್ಲಿ ಎತ್ತಿನಗಾಡಿಯೇ ಗಟ್ಟಿ ಎಂಬ ಸಂದೇಶ ಸಾರಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಾನು ದೇಶದ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಸರ್ಕಾರ ಪ್ರತಿದಿನ ಜನರ ಪಿಲ್​ ಪಾಕೆಟ್​ ಮಾಡುತ್ತಿದೆ. ತೈಲ ಬೆಲೆ ಏರಿಕೆಯಿಂದ ಅಗತ್ಯವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಈ ಸರ್ಕಾರವನ್ನ ಕೆಳಗಿಳಿಸುವವರೆಗೂ ನಾವು ಹೋರಾಡುತ್ತೇವೆ. ಡೀಸೆಲ್​ -ಪೆಟ್ರೋಲ್​ ದರ 75ರೂ.ಗೆ ಇಳಿಕೆಯಾಗಬೇಕು ಎಂದು ಆಗ್ರಹಿಸಿದರು.