ಜಿಲ್ಲೆ

ರಾಜಭವನ ಚಲೋ: ಈಶ್ವರಪ್ಪರ ವಜಾಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಹೋರಾಟ

arunakunigal

ಬೆಂಗಳೂರು: ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್​ ಶಾಸಕರು ಮಂಗಳವಾರ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.

ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಯು.ಟಿ. ಖಾದರ್, ಡಾ.ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಸಲೀಂ ಅಹಮದ್ ಅವರು ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.