ಜಿಲ್ಲೆ

ಸಾವಿನಲ್ಲೂ ಒಂದಾದ ಹಿರಿಯ ದಂಪತಿ

Dakshina Kannada

ಕಾಪು: ವಿವಾಹವಾಗಿ ಐದು ದಶಕಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ನಡೆದಿದೆ.

ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ(80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ.ಶೆಟ್ಟಿ(75) ಸಾವಿನಲ್ಲೂ ಒಂದಾದ ದಂಪತಿ. ಕೃಷ್ಣ ಶೆಟ್ಟಿ ಯಾನೆ ಕುಟ್ಟಿ ಶೆಟ್ಟಿ ಮಂಗಳವಾರ ಬೆಳಗ್ಗೆ ನಿಧನ ಹೊಂದಿದ್ದರೆ, ಅವರ ಪತ್ನಿ ರೇವತಿ ಕೆ.ಶೆಟ್ಟಿ ಬುಧವಾರ ಮುಂಜಾನೆ ನಿಧನರಾದರು. ದಂಪತಿಯ ಮಕ್ಕಳು ಮುಂಬೈ ಸಹಿತ ಬೇರೆ ಕಡೆಗಳಲ್ಲಿರುವುದರಿಂದ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರ ಶವವನ್ನು ಕುಟುಂಬದ ಮೂಲ ಮನೆಯಲ್ಲಿ ಶೈತ್ಯೀಕರಣ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು. ಬುಧವಾರ ಮುಂಜಾನೆ ಮಕ್ಕಳು ಮನೆಗೆ ಬರುತ್ತಲೇ ಅವರ ಮೃತದೇಹವನ್ನು ತಮ್ಮ ಸ್ವಂತ ಮನೆಗೆ ತರಲಾಗಿತ್ತು. ಮೃತದೇಹವನ್ನು ಮನೆಯೊಳಗೆ ತಂದು ಇಟ್ಟ ಕೆಲವೇ ಕ್ಷಣಗಳಲ್ಲಿ ಪತ್ನಿ ರೇವತಿ ಶೆಟ್ಟಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.