ಜಿಲ್ಲೆ

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಅವಿನಾಶ್ ಜೈನಹಳ್ಳಿ

ಮಹಾರಾಜ ಪದವಿ ಪೂರ್ವ ಕಾಲೇಜು, ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಡಿ.ಬನುಮಯ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜು, ಶಾರದಾ ವಿಲಾಸ ಪದವಿ ಪೂರ್ವ ಕಾಲೇಜಿನಲ್ಲಿ 2023ನೇ ಸಾಲಿನ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ನಡೆಯಲಿದೆ.

ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆಗಸ್ಟ್ 21ರಿಂದ ಸೆಪ್ಟೆಂಬರ್ 2 ರವರೆಗೆ ಪರೀಕ್ಷಾ ದಿನಗಳಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದ್ದಾರೆ.