??????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರನ್ನು ಸ್ಮರಿಸುವ ದಿನ

ಅರಸೀಕೆರೆ: ಹಲವು ಮಹನೀಯರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರೃಬಂತು. ಇಂದು ಅಂತಹ ಮಹನೀಯರನ್ನು ಸ್ಮರಿಸುವ ದಿನ ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಹೇಳಿದರು.


ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜರೋಹಣ ನೆರವೇರಿಸಿ ಮಾತನಾಡಿದರು. ಬ್ರಿಟಿಷರ ದಾಸ್ಯದ ವಿರುದ್ಧ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ, ಭಗತ್‌ಸಿಂಗ್, ಬಾಲಗಂಗಾಧರ ತಿಲಕ್, ಸುಭಾಷ್‌ಚಂದ್ರ ಬೋಸ್ ಸೇರಿದಂತೆ ಹಲವು ಮಹನೀಯರ ಕೊಡುಗೆ ಅನನ್ಯವಾಗಿದ್ದು ಎಲ್ಲರನ್ನು ಸ್ಮರಿಸೋಣ ಎಂದು ಕರೆ ನೀಡಿದರು.


ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ವಾತಂತ್ರ್ಯ ಸಂಗ್ರಾಮದ ಕ್ಷಣಗಳನ್ನು ಬಣ್ಣಿಸಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗರು, ನಿವೃತ್ತ ಯೋಧರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ನಿವೃತ್ತ ಯೋಧರು, ಪದವಿ, ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತರನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.


ತಾಪಂ ಇಒ ನಾಗರಾಜ್, ಡಿವೈಎಸ್‌ಪಿ ಲೋಕೇಶ್, ಬಿಇಒ ಮೋಹನ್‌ಕುಮಾರ್, ಪೌರಾಯುಕ್ತ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಶಿವಮೂರ್ತಿ, ಕಸಾಪ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಸಮಾಜ ಸೇವಕ ರೈಲ್ವೆ ಮಹಾದೇವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.


ನಗರಸಭೆ, ಟೌನ್‌ಕ್ಲಬ್, ಹೊಯ್ಸಳೇಶ್ವರ ಪದವಿ ಕಾಲೇಜು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೈತ ಸಂಘದ ಸೇರಿದಂತೆ ಹಲವೆಡೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.