ಹಿರೇಕೆರೂರ: ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಪ್ರಾಚಾರ್ಯ ಡಾ.ಎಸ್.ಬಿ. ಚನ್ನಗೌಡ್ರ ಹೇಳಿದರು.
ಪಟ್ಟಣದ ಬಿ.ಆರ್. ತಂಬಾಕದ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕ ಹಾಗೂ ಪತ್ರಿಕೋದ್ಯಮ ವಿಭಾಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ಜು. 26ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಗುತ್ತದೆ. ಭಾರತೀಯರಿಗೆ ಇದು ಎಂದೂ ಮರೆಯದ ದಿನ. ಜಮ್ಮು-ಕಾಶ್ಮೀರದ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ವೀರಯೋಧರು ಸದೆ ಬಡಿದು ಅವರು ಆಕ್ರಮಿಸಿಕೊಂಡಿದ್ದ ಜಾಗ ವಶಕ್ಕೆ ಪಡೆದ ದಿನವಾಗಿದೆ ಎಂದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ವಿಜಯಕುಮಾರ ಮುದಿಗೌಡರ ಮಾತನಾಡಿ, ಯುವಕರು ಸದೃಢ ದೇಹ ಹೊಂದುವ ಮೂಲಕ ಭಾರತೀಯ ಸೇನೆ ಸೇರಿ ದೇಶ ಸೇವೆ ಮಾಡಬೇಕಿದೆ. ಕಾರ್ಗಿಲ್ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು ಎಂದರು.
ಎನ್ಎಸ್ಎಸ್ ಅಧಿಕಾರಿಗಳಾದ ಮೋಹನಕುಮಾರ ಕೆ.ಪಿ., ಕವಿತಾ ಅಣಜಿ, ಲಿಂಗರಾಜ ಹಲವಾಲ್, ಲತಾ ಬಿ.ವೈ., ಉಪನ್ಯಾಸಕರಾದ ಸಿ.ಆರ್ ದೂದೀಹಳ್ಳಿ, ಸಂತೋಷ ಬಣಕಾರ, ಲಕ್ಷ್ಮಣ ಗೌಡಗೇರಿ, ಪ್ರವೀಣ ಕೂರಗೇರ, ಎಸ್.ಎಸ್. ಹುಲ್ಲಿನಕೊಪ್ಪ, ವಿರುಪಾಕ್ಷಪ್ಪ ಎಸ್, ಪ್ರಶಾಂತ ಮರಿಗೂಳಪ್ಪನವರ, ಎನ್ಎಸ್ಎನ್ ಘಟಕದ ಸ್ವಯಂ ಸೇವಕರು ಹಾಗೂ ಪತ್ರಿಕೋದ್ಯಮ ಮತ್ತು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇದ್ದರು.