ಶಿವಮೊಗ್ಗ: ನಗರದ ಗೋಪಾಳ ಬಡಾವಣೆಯಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಸುಧಾ (48) ಮೃತ ಮಹಿಳೆ. ಅವರು ತಂಗಿದ್ದ ಅಪಾರ್ಟ್‌ಮೆಂಟ್ ಮನೆ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದು ಮನೆಯ ಬಾತ್ ರೂಂನಲ್ಲಿ ಮೃತದೇಹ ಪತ್ತೆಯಾಗಿದೆ. ಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಮುರಿದು ಪರಿಶೀಲಿಸಿದಾಗ ಭಾಗಶಃ ಕೊಳತೆ ಸ್ಥಿತಿಯಲ್ಲಿ ಸುಧಾ ಅವರ ಶವ ಪತ್ತೆಯಾಗಿದೆ.
ಸುಧಾ ಅವರು ವಿವಾಹಿತರಾಗಿದ್ದು, ಪತಿ ತೊರೆದಿದ್ದರು. ಅಪಾರ್ಟ್‌ಮೆಂಟ್‌ನಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇವರ ಪುತ್ರ ಬೋರ್ಡಿಂಗ್ ಶಾಲೆಯೊಂದರಲ್ಲಿ ಅಭ್ಯಾಸ ಮಾಡುತ್ತಿದ್ದಾನೆ ಎನ್ನಲಾಗಿದೆ. ಅವರ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಇನ್‌ಸ್ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.