ನೆಲಮಂಗಲ ತಾಲೂಕಿನ ಬಾವಿಕೆರೆ ಬಳಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಮುಖಂಡರ ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಡಾ.ಪೊಂಗುಲೇಟಿ ಸುಧಾಕರ್‌ರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಜಿಜೆಪಿ ತಾಲೂಕು ಅದ್ಯಕ್ಷ ಜಗದೀಶ್‌ಚೌಧರಿ, ಬಿಜೆಪಿ ಗ್ರಾಮಾಂತರ ಜಿಲ್ಲಾದ್ಯಕ್ಷ ರಾಮಕೃಷ್ಣಪ್ಪ, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ಮಾಜಿ ಸದಸ್ಯ ರಮೇಶ್, ರೈತ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೀಶ್, ನಗರಸಭೆ ಹೆಚ್ಚುವರಿ ಸದಸ್ಯ ಕೃಪಾನಂದ್ ಇದ್ದರು. 
ಜಿಲ್ಲೆ

ವಿಕಸಿತ ಭಾರತ ಮೋದಿ ಗುರಿ

ಬೆಂಗಳೂರು ಗ್ರಾಮಾಂತರ ಡೆಸ್ಕ್

ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಡಾ.ಪೊಂಗುಲೇಟಿ ಸುಧಾಕರ್‌ರೆಡ್ಡಿ ಹೇಳಿಕೆ

ನೆಲಮಂಗಲ: ವಿಕಸಿತ ಭಾರತ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಡಾ.ಪೊಂಗುಲೇಟಿ ಸುಧಾಕರ್‌ರೆಡ್ಡಿ ತಿಳಿಸಿದರು.

ಯಂಟಗಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಾವಿಕೆರೆ ಬಳಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಬಿಜೆಪಿ ಮಂಗಳವಾರ ಆಯೋಜಿಸಿದ್ದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಬಿಜೆಪಿ ಮೇಲೆ ಆಪಾರ ಗೌರವ ಇಟ್ಟುಕೊಂಡಿದ್ದಾರೆ. ನರೇಂದ್ರ ಮೋದಿ ಉತ್ತಮ ಆಡಳಿತದ ಮೂಲಕ ಮೂರನೇ ಬಾರಿಗೆ ಪ್ರಧಾನಿಯಾಗಿದ್ದು, ವಿಕಸಿತ ಭಾರತ ನಿರ್ಮಾಣದ ಗುರಿ ಹೊಂದಿದ್ದಾರೆ. ದೇಶದ ಆರ್ಥಿಕ ವ್ಯವಸ್ಥೆಯನ್ನು ಉತ್ತಮ ಮಟ್ಟಕ್ಕೆ ತಗೆದುಕೊಂಡು ಹೋಗಿದ್ದು ವಿಶ್ವದ ಸಾಕಷ್ಟು ದೇಶಗಳಿಗೆ ಮಾದರಿಯಾಗಿದ್ದಾರೆ ಎಂದರು.

ಬಿಜೆಪಿ ಬೂತ್ ಸಮಿತಿ ಪುನರ್ ರಚನೆ ಮಾಡಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕಿದೆ ಎಂದರು. ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾಸುರೇಶ್, ಪ್ರಧಾನ ಕಾರ್ಯದರ್ಶಿ ಶೀಲಾ, ಎಸ್ಟಿ ಮೋರ್ಚಾ ಅಧ್ಯಕ್ಷ ಕೆಂಪರಾಮಯ್ಯ, ಸದಸ್ಯ ಅಭಿಯಾನ ಸಂಚಾಲಕಿ ರಾಜಮ್ಮಪ್ರಕಾಶ್, ಸಾಮಾಜಿಕ ಜಾಲತಾಣ ಉಸ್ತುವಾರಿ ಸ್ಟುಡಿಯೋಮಂಜುನಾಥ್, ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷೆ ಸೌಮಾ ಉಪಸ್ಥಿತರಿದ್ದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ಜನಪರ ಆಡಳಿತ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ ಹಾಗೂ ಅವ್ಯವಹಾರ ಹೆಚ್ಚಾಗಿದೆ. ಜತೆಗೆ ವಿದ್ಯುತ್, ಕಂದಾಯ ಸೇರಿ ಜನರ ಮೇಲೆ ತೆರಿಗೆ ಹೆಚ್ಚಳ ಮಾಡಿದ್ದು ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗ್ಯಾರಾಂಟಿಗಳನ್ನು ನೀಡಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ಜತೆಗೆ ರಾಜ್ಯ ಕಾಂಗ್ರೇಸ್ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮೂಡ ಪ್ರಕರಣ, ವಾಲ್ಮೀಕಿ ಮತ್ತು ಭೋವಿ ನಿಗಮ ಮಂಡಳಿ ಹಗರಣದಲ್ಲಿ ಭಾಗಿಯಾಗಿ ರಾಜ್ಯದ ಜನರ ಕೋಟ್ಯಂತರ ತೆರಿಗೆ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಡಾ.ಪೊಂಗುಲೇಟಿ ಸುಧಾಕರ್‌ರೆಡ್ಡಿ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರು ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಯ್ಯುತ್ತಿದ್ದಾರೆ. ಅವರ ಜನಪರ ಕಾಳಜಿ ಸಾಕಷ್ಟು ಮಂದಿಗೆ ಸ್ಪೂರ್ತಿಯಾಗಿದೆ. ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರ ಪರಿಶ್ರಮದಿಂದಾಗಿ ಸದೃಢವಾಗಿ ಸಂಘಟನೆ ಬೆಳೆದಿದೆ. ಅದಕ್ಕೆ ಮತ್ತಷ್ಟು ಪುಷ್ಟಿ ತುಂಬುವ ಕೆಲಸ ನಿರಂತರವಾಗಿ ಮಾಡಲಾಗುತ್ತಿದೆ. - ಜಗದೀಶ್‌ಚೌಧರಿ ಬಿಜೆಪಿ ತಾಲೂಕು ಅಧ್ಯಕ್ಷ