ಮಮದಾಪುರ: ಗ್ರಾಮದ ನಿವಾಸಿ ಬಸವರಾಜ ಮಾದೇವ ಮನ್ನಿಕೇರಿ (35) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ ವ್ಯಕ್ತಿಯು ವಿಪರೀತ ಮದ್ಯ ಸೇವಿಸುತ್ತಿದ್ದ. ಮಧ್ಯಾಹ್ನ ಕುಡಿದ ಮತ್ತಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೋಕಾಕ ಪೊಲೀಸರು ತಿಳಿಸಿದ್ದಾರೆ. ಮತರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಕಿರಣ್ ಮೋಹಿತೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.