ಜಿಲ್ಲೆ

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ರಾಜಣ್ಣ

ಹನೂರು: ತಾಲೂಕಿನ ಪೊನ್ನಾಚಿ ಮಾರ್ಗದಲ್ಲಿ ಸುರಿದ ಜೋರು ಮಳೆಗೆ ಮಂಗಳವಾರ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಾರ್ವಜನಿಕರು ಸಂಚರಿಸಲು ತೊಂದರೆ ಅನುಭವಿಸಿದರು.


ಅರಣ್ಯ ಪ್ರದೇಶದಿಂದ ಕೂಡಿರುವ ಈ ಭಾಗದಲ್ಲಿ ಸೋಮವಾರ ತಡರಾತ್ರಿ ಜೋರು ಮಳೆಯಾಗಿತ್ತು. ಪರಿಣಾಮ ಬೆಳಗ್ಗೆ ಸುಮಾರು 8ರ ವೇಳೆಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದ ಒಂದೂವರೆ ಗಂಟೆಗಳ ಕಾಲ ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದ್ದು, ಕಾದು ನಿಲ್ಲುವಂತಾಗಿತ್ತು. ಈ ಬಗ್ಗೆ ತಿಳಿದ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಜು ಅವರು ಸ್ಥಳಕ್ಕಾಗಮಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ತಿಳಿಸಿದರು.


ಸ್ಥಳಕ್ಕಾಗಮಿಸಿದ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.