ಕೆ.ಆರ್.ಪೇಟೆ ತಾಲೂಕಿನ ಮುದುಗೆರೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಮಹಿಳೆ ಮೃತಪಟ್ಟಿರುವ ಸ್ಥಳಕ್ಕೆ ಶಾಸಕ ಎಚ್.ಟಿ.ಮಂಜು ಭೇಟಿ ನೀಡಿ ಪರಿಶೀಲಿಸಿದರು.  
ಜಿಲ್ಲೆ

ವಿದ್ಯುತ್ ತಂತಿ ತಗುಲಿ ರೈತ ಮಹಿಳೆ ಸಾವು

ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿ ಮುದುಗೆರೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಮಹಿಳೆ ಮೃತಪಟ್ಟಿದ್ದಾರೆ.


ಗ್ರಾಮದ ನೇತ್ರಾವತಿ(42) ವಿದ್ಯುತ್ ಶಾಕ್‌ನಿಂದ ಮೃತಪಟ್ಟ ರೈತ ಮಹಿಳೆ.


ಮನೆ ಸಮೀಪವಿರುವ ಜಮೀನಿನಲ್ಲಿ ಕೃಷಿ ಚಟುವಟಿಕೆ ತೊಡಗಿದ್ದ ಸಂದರ್ಭದಲ್ಲಿ ಜಮೀನಿನಲ್ಲಿ ವಿದ್ಯುತ್ ಕಂಬದ ವೈರ್‌ಗೆ ವಿದ್ಯುತ್ ಪ್ರವಾಹವಾಗಿದೆ. ಗೈ ವೈರ್ ಮುಟ್ಟಿದ ನೇತ್ರಾವತಿ ಮೃತಪಟ್ಟಿದ್ದಾಳೆ. ವಿಷಯ ತಿಳಿದ ಸೆಸ್ಕ್ ಇಇ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ಎಚ್.ಟಿ.ಮಂಜು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿದರು. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.