ಮೈಸೂರು: ಮಂದಗೆರೆ ಮಂಜುನಾಥ್ ಅಭಿಮಾನಿ ಬಳಗ, ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ, ಹೊಯ್ಸಳ ಕರ್ನಾಟಕ ಸಂಘ ವತಿಯಿಂದ ಸೆ.10 ರಂದು ಬೆಳಗ್ಗೆ 10.30ಕ್ಕೆ ನಾರಾಯಣಶಾಸ್ತ್ರಿ ರಸ್ತೆಯ ಹೊಯ್ಸಳ ಕರ್ನಾಟಕ ಸಂಘದಲ್ಲಿ ‘ಅಶೋಕಾಭಿನಂದನಾ ಕಾರ್ಯಕ್ರಮ’ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್ ಹೇಳಿದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರ‌್ನಹಳ್ಳಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಜಯನಗರದ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಪ್ರೊ. ಭಾಷ್ಯಂ ಸ್ವಾಮೀಜಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಿರಿಯ ಉಪಾಧ್ಯಕ್ಷ ಭಾನು ಪ್ರಕಾಶ್ ಶರ್ಮ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.