ಜಿಲ್ಲೆ

ಉಡುಪಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ರಾಜೀವ ಶೆಟ್ಟಿ

ಪ್ರಭಾಕರ ಪೂಜಾರಿ ಶ್ಲಾಘನೆ

ರಾಜ್ಯ ರೆಡ್​ಕ್ರಾಸ್​ನ ಸಭಾಪತಿಗೆ ಸನ್ಮಾನ

ವಿಜಯವಾಣಿ ಸುದ್ದಿಜಾಲ ಉಡುಪಿ

ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ಭಾರತೀಯ ರೆಡ್​ಕ್ರಾಸ್​ನ ಅಂಗ ಸಂಸ್ಥೆಯಾದ ಕರ್ನಾಟಕ ರೆಡ್​ಕ್ರಾಸ್​ನ ಸಭಾಪತಿಗಳಾಗಿ ಮೂರನೇ ಬಾರಿ ಆಯ್ಕೆಯಾಗುವ ಮೂಲಕ ಬಸ್ರೂರು ರಾಜೀವ ಶೆಟ್ಟಿ ಅವರು ಉಡುಪಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಇದು ಹೆಮ್ಮೆ ಪಡುವ ಸಾಧನೆಯಾಗಿದೆ ಎಂದು ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಶ್ಲಾಘಿಸಿದರು.

ಉಡುಪಿಯ ರೆಡ್​ ಕ್ರಾಸ್​ ಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಮಿತಿ, ವಿವಿಧ ಸಂಘಟನೆಗಳ ಆಶ್ರಯದಲ್ಲಿ ಏ.24ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಸ್ರೂರು ರಾಜೀವ ಶೆಟ್ಟಿ ಅವರನ್ನು ಪತ್ನಿ ಜ್ಯೋತಿ ಶೆಟ್ಟಿ ಸಹಿತವಾಗಿ ಸನ್ಮಾನಿಸಿ ಮಾತನಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತಾನಾಡಿ, ರಾಜೀವ ಶೆಟ್ಟಿ ಅವರು ವಿಶೇಷ ಸೇವಾಕಾರ್ಯಗಳ ಮೂಲಕ ಉಡುಪಿ ರೆಡ್​ ಕ್ರಾಸ್​ನ ಘನತೆ ಎತ್ತರಿಸಿದ್ದಾರೆ ಎಂದರು.

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಶುಭ ಹಾರೈಸಿದರು. ಜಿಲ್ಲಾ ಮಾಜಿ ಗವರ್ನರ್​ ವಿ.ಜಿ. ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಅಂಬಲಪಾಡಿಯ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ವಿಜಯ ಬಲ್ಲಾಳ, ಉಡುಪಿ ಜಿಲ್ಲಾ ಸ್ಕೌಟ್ಸ್​ ಮತ್ತು ಗೈಡ್ಸ್​ ಸಂಸ್ಥೆಯ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಕುಂದಾಪುರ ರೆಡ್​ಕ್ರಾಸ್​ ಸಭಾಪತಿ ಜಯಕರ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್​ ಕ್ರಾಸ್​ ಸಂಯೋಜಕಿ ಡಾ. ಗಾಯತ್ರಿ, ದಕ್ಷಿಣ ಕನ್ನಡ ಜಿಲ್ಲಾ ರೆಡ್​ ಕ್ರಾಸ್​ನ ಸಭಾಪತಿ ಶಾಂತಾರಾಮ ಶೆಟ್ಟಿ, ಉಡುಪಿ ಲಯನ್ಸ್​ ಕ್ಲಬ್​ ಅಧ್ಯಕ್ಷ ಲಯನ್​ ಲೂಯಿಸ್​ ಲೋಬೋ, ರೆಡ್​ ಕ್ರಾಸ್​ ಉಪಸಭಾಪತಿ ಡಾ. ಅಶೋಕಕುಮಾರ್​ ವೈ.ಜಿ., ಮಾಜಿ ಖಜಾಂಚಿ ಟಿ.ಚಂದ್ರಶೇಖರ ಉಪಸ್ಥಿತರಿದ್ದರು.

ಖ್ಯಾತ ಕಲಾವಿದ ಶಂಕರದಾಸ ಚಂಡ್ಕಳ ಅವರು ನಾಡಗೀತೆ ಹಾಡಿದರು.

ಜಿಲ್ಲಾ ರೆಡ್​ಕ್ರಾಸ್​ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತಾನಾಡಿ, ಸ್ವಾಗತಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಸೇರಿಗಾರ ಕಾರ್ಯಕ್ರಮ ನಿರ್ವಹಿಸಿದರು. ರೆಡ್​ಕ್ರಾಸ್​ ಖಜಾಂಚಿ ರಮಾದೇವಿ ವಂದಿಸಿದರು.